ಶುಕ್ರದೆಸೆ ನ್ಯೂಸ್:- ಚುನಾವಣೆ ಮತದಾನ ಮುಕ್ತಾಯವಾಗುವ 48 ಗಂಟೆ ಮೊದಲಿನಿಂದಲೇ 144 ಸೆಕ್ಷನ್ ಜಾರಿ, ಧ್ವನಿವರ್ಧಕ ಬಳಕೆ ನಿಷೇಧ. , 2023ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗುವ 48 ಗಂಟೆ ಮೊದಲಿನಿಂದಲೇ 144 ಸೆಕ್ಷನ್ ಜಾರಿ, ಧ್ವನಿವರ್ಧಕ ಬಳಕೆ ನಿಷೇಧ

ದಾವಣಗೆರೆ : ವಿಧಾನಸಭಾ ಸಾರ್ವತಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 11 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ನಿಷೇದಾಜ್ಞೆಯ ಅವಧಿಯಲ್ಲಿ ಮೇ 10 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ, ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು, ಒಟ್ಟಾಗಿ ಓಡಾಡುವಂತಿಲ್ಲ. ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ ಹಾಗೂ ಪ್ರತಿಭಟನೆ ಮಾಡುವಂತಿಲ್ಲ.

ನಿಷೇದಾಜ್ಞೆಯ ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಉಪಯೋಗಿಸಲು ಅನುಮತಿ ಇರುವುದಿಲ್ಲ. ನಿಷೇಧಾಜ್ಞೆಯು ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದುಕೊಂಡವರಿಗೆ ಈ ಆದೇಶದಿಂದ ವಿನಾಯಿತಿ ಇರುತ್ತದೆ.

Leave a Reply

Your email address will not be published. Required fields are marked *

You missed

error: Content is protected !!