ಜೈಲಿನಲ್ಲಿ ಪೊಲೀಸರ ಮುಂದೆಯೇ ಚಾಕುವಿನಿಂದ ಚುಚ್ಚಿ ಚುಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.!
May 5, 2023
ಶುಕ್ರದೆಸೆ ನ್ಯೂಸ್, ಡೆಸ್ಕ್ : ಆರೋಪಿಯೊಬ್ಬನನ್ನು ಮೂವರು ಕಿರಾತಕರು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ತಿಹಾರ್ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಇನ್ನೂ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೆಹಲಿಯ ರೋಹಿಣಿ ಕೋರ್ಟ್ ಶೂಟೌಟ್ ಪ್ರಕರಣದಲ್ಲಿ ಆರೋಪಿ ದರೋಡೆಕೋರ ತಾಜ್‌ಪುರಿಯನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.
ತಾಜ್‌ಪುರಿನನ್ನು ಮೂವರು ಹಂತಕರು ಜೈಲಿನಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದ ತಾಜ್‌ಪುರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತಿಹಾರ್ ಜೈಲಿನ ಪೋಲಿಸರ ಮುಂದೆಯೇ ಈ ಕೊಲೆ ನಡೆದಿದೆ. ಈ ದೃಶ್ಯವನ್ನು ನೋಡಿದ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.