ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು ಜಿ. ಪರಮೇಶ್ವರ್ ಸೇರಿದಂತೆ ಎಂಟು ಜನರು ಮಂತ್ರಿಗಳಾಗಿ ಇಂದು ಪ್ರಮಾಣ ವಚನ ಸ್ವೀಕಾರ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರು ಪಾಲ್ಗೊಂಡು, ತಾರಾ ಮೆರುಗು ನೀಡಿದರು.
ನಟ ಶಿವರಾಜ್ ಕುಮಾರ್, ತಮಿಳಿನ ಖ್ಯಾತ ನಟ ಕಮಲ್ ಹಾಸನ್, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ಸಾಧು ಕೋಕಿಲಾ, ದುನಿಯಾ ವಿಜಯ್, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. : ಹಳ್ಳಿಗಾಡಿನ ಜೀವನ, ದನ ಕಾಯುತ್ತಿದ್ದ ಹುಡುಗನಿಂದ ಮುಖ್ಯಮಂತ್ರಿ ಗಾದಿವರೆಗೆ; ಸಿದ್ದರಾಮಯ್ಯ ಸಾಗಿಬಂದ ಹಾದಿ..
ಈ ಬಾರಿ ಚುನಾವಣೆಯಲ್ಲೂ ಶಿವರಾಜ್ ಕುಮಾರ್, ದುನಿಯಾ ವಿಜಯ್, ಸಾಧುಕೋಕಿಲಾ, ನಿಶ್ವಿಕಾ ನಾಯ್ಡು, ರಮ್ಯಾ ಸೇರಿದಂತೆ ಹಲವರು ಪ್ರಚಾರದಲ್ಲೂ ಪಾಲ್ಗೊಂಡಿದ್ದರು. ಕೆಲವರು ಸಿದ್ದರಾಮಯ್ಯನವರ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ, ಇನ್ನೂ ಹಲವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು
ಇಂತಹ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಮಲ್ ಹಾಸನ್ ಬಂದಿದ್ದು ವಿಶೇಷವಾಗಿತ್ತು. ಈ ಹಿಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲೂ ಕಮಲ್ ಭಾಗಿಯಾಗಿದ್ದರು. ಈ ಯಾತ್ರೆಗೆ ಅವರು ಬೆಂಬಲವನ್ನೂ ಸೂಚಿಸಿದ್ದರು.
ಕಮಲ್ ಹಾಸನ್, ಡಿ.ಕೆ. ಶಿವಕುಮಾರ್, ಪ್ರಮಾಣ ವಚನ, ರಮ್ಯಾ, ಶಿವರಾಜ್ ಕುಮಾರ್, ಸಿದ್ಧರಾಮಯ್ಯ
ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ
100% ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನ ಕಾಂಗ್ರೆಸ್ ಈಡೇರಿಸಲಿದೆ – ರಮ್ಯಾ
ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ ಹೊರಡಿಸಲಾಗಿದೆ.